,
ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!
ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!
ಜಯ ಸುಂದರ ನದಿ ವನಗಳ ನಾಡೇ, ಜಯ ಹೇ ರಸಋಷಿಗಳ ಬೀಡೆ!
ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!
ಭೂದೇವಿಯ ಮಕುಟದ ನವಮಣಿಯೆ, ಗಂಧದ ಚಂದದ ಹೊನ್ನಿನ ಗಣಿಯೆ; ರಾಘವ ಮಧುಸೂಧನರವತರಿಸಿದ ಭಾರತ ಜನನಿಯ ತನುಜಾತೆ !
ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!
ಜನನಿಯ ಜೋಗುಳ ವೇದದ ಘೋಷ, ಜನನಿಗೆ ಜೀವವು ನಿನ್ನಾವೇಶ, ಜನನಿಯ ಜೋಗುಳ ವೇದದ ಘೋಷ, ಜನನಿಗೆ ಜೀವವು ನಿನ್ನಾವೇಶ,
ಹಸುರಿನ ಗಿರಿಗಳ ಸಾಲೇ, ನಿನ್ನಯ ಕೊರಳಿನ ಮಾಲೆ, ಹಸುರಿನ ಗಿರಿಗಳ ಸಾಲೇ, ನಿನ್ನಯ ಕೊರಳಿನ ಮಾಲೆ,
ಕಪಿಲ ಪತಂಜಲ ಗೌತಮ ಜಿನನುತ, ಭಾರತ ಜನನಿಯ ತನುಜಾತೆ ! ಜಯ ಹೇ ಕರ್ನಾಟಕ ಮಾತೆ!
ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!
ಶಂಕರ ರಾಮಾನುಜ ವಿದ್ಯಾರಣ್ಯ, ಬಸವೇಶ್ವರ ಮಧ್ವರ ದಿವ್ಯಾರಣ್ಯ ಶಂಕರ ರಾಮಾನುಜ ವಿದ್ಯಾರಣ್ಯ, ಬಸವೇಶ್ವರ ವಧ್ವರ ದಿವ್ಯಾರಣ್ಯ
ರನ್ನ ಷಡಕ್ಷರಿ ಪೊನ್ನ, ಪಂಪ ಲಕುಮಿಪತಿ ಜನ್ನ ರನ್ನ ಷಡಕ್ಷರಿ ಪೊನ್ನ, ಪಂಪ ಲಕುಮಿಪತಿ ಜನ್ನ
ಕುಮಾರವ್ಯಾಸರ ಮಂಗಳ ಧಾಮ, ಕವಿ ಕೋಗಿಲೆಗಳ ಪುಣ್ಯಾರಾಮ ನಾನಕ ರಾಮಾ ನಂದ ಕಬೀರರ ಭಾರತ ಜನನಿಯ ತನುಜಾತೆ ! ಜಯ ಹೇ ಕರ್ನಾಟಕ ಮಾತೆ!
ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!
ತೈಲಪ ಹೊಯ್ಸಳರಾಳಿದ ನಾಡೇ, ಡಂಕಣ ಜಕಣರ ನೆಚ್ಚಿನ ಬೀಡೆ ತೈಲಪ ಹೊಯ್ಸಳರಾಳಿದ ನಾಡೇ, ಡಂಕಣ ಜಕಣರ ನೆಚ್ಚಿನ ಬೀಡೆ
ಕೃಷ್ಣ ಶರಾವತಿ ತುಂಗಾ, ಕಾವೇರಿಯ ವರ ರಂಗಾ ಕೃಷ್ಣ ಶರಾವತಿ ತುಂಗಾ, ಕಾವೇರಿಯ ವರ ರಂಗಾ
ಚೈತನ್ಯ ಪರಮಹಂಸ ವಿವೇಕರ, ಭಾರತ ಜನನಿಯ ತನುಜಾತೆ ! ಜಯ ಹೇ ಕರ್ನಾಟಕ ಮಾತೆ!
ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!
ಸರ್ವ ಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ ಸರ್ವ ಜನಾಂಗದ ಶಾಂತಿಯ ತೋಟ, ರಸಿಕರ ಕಂಗಳ ಸೆಳೆಯುವ ನೋಟ
ಹಿಂದೂ ಕ್ರೈಸ್ತ ಮುಸಲ್ಮಾನ, ಪಾರಸಿಕ ಜೈನರುದ್ಯಾನ ಹಿಂದೂ ಕ್ರೈಸ್ತ ಮುಸಲ್ಮಾನ, ಪಾರಸಿಕ ಜೈನರುದ್ಯಾನ
ಜನಕನ ಹೋಲುವ ದೊರೆಗಳ ಧಾಮ, ಗಾಯಕ ವೈಣಿಕರಾರಾಮ
ಕನ್ನಡ ನುಡಿ ಕುಣಿದಾಡುವ ಗೇಹ, ಕನ್ನಡ ತಾಯಿಯ ಮಕ್ಕಳ ದೇಹ ಕನ್ನಡ ನುಡಿ ಕುಣಿದಾಡುವ ಗೇಹ, ಕನ್ನಡ ತಾಯಿಯ ಮಕ್ಕಳ ದೇಹ
ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ
ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!
ಜಯ ಸುಂದರ ನದಿ ವನಗಳ ನಾಡೇ, ಜಯ ಹೇ ರಸಋಷಿಗಳ ಬೀಡೆ!
ಜಯ ಭಾರತ ಜನನಿಯ ತನುಜಾತೆ, ಜಯ ಹೇ ಕರ್ನಾಟಕ ಮಾತೆ!
Reviews
No reviews yet.