Untitled

ಕಲಿಯುಗದೊಳು ಹರಿನಾಮವ ನೆನೆದರೆ ಕುಲಕೋಟಿಗಳುದ್ಧರಿಸುವುವು ||ಪ||
ಸುಲಭದ ಮುಕುತಿಗೆ ಸುಲಭನೆಂದೆನಿಸುವ ಜಲರುಹನಾಭನ ನೆನೆಮನವೆ ||ಅ||

ಸ್ನಾನವನರಿಯೆನು ಮೌನವನರಿಯೆನು ಧ್ಯಾನವನರಿಯೆನೆಂದೆನಬೇಡ
ಜಾನಕಿವಲ್ಲಭ ದಶರಥನಂದನ ಗಾನವಿನೋದನ ನೆನೆಮನವೆ ||

ಅರ್ಚಿಸಲರಿಯೆನು ಮೆಚ್ಚಿಸಲರಿಯೆನು ತುಚ್ಛನು ನಾನೆಂದೆನಬೇಡ
ಅಚ್ಯುತಾನಂತ ಗೋವಿಂದ ಮುಕುಂದನ ಇಚ್ಛೆಯಿಂದ ನೀ ನೆನೆಮನವೆ ||

ಜಪವೊಂದರಿಯೆನು ತಪವೊಂದರಿಯೆನು ಉಪದೇಶವಿಲ್ಲೆಂದೆನಬೇಡ
ಅಪಾರಮಹಿಮ ಶ್ರೀಪುರಂದರವಿಠಲನ ಉಪಾಯದಿಂದಲಿ ನೆನೆಮನವೆ |

Rate this poem: 

Reviews

No reviews yet.